ಹುಮ್ನಾಬಾದ್: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 65ರ ಬಳಿ ಲಾರಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 65 ರಾಮ ಮತ್ತು ರಾಜ್ಯ ಪದವಿ ಪೂರ್ವ ಕಾಲೇಜು ಮುಂಭಾಗದ ರಸ್ತೆಯಲ್ಲಿ ಬುಧವಾರ ಸಂಜೆ 6:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಹುಮ್ನಾಬಾದ್ ನಗರದ ಶಿವಕುಮಾರ್ ಸಂಗಯ್ಯ ಸ್ವಾಮಿ(21)ಎಂದು ಗುರುತಿಸಲಾಗಿದೆ