ಹೊಸಕೋಟೆ: ಹೊಸಕೋಟೆಯಲ್ಲಿ ಬಾಬು ಜಗಜೀವನ್ ರಾಮ್ ರವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಚಾಲನೆ ನೀಡಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆಯ ಮಿನಿ ವಿಧಾನಸೌಧದ ಆವರಣದಲ್ಲಿ ಮಾಜಿ ಉಪ ಪ್ರಧಾನಿ ದಿವಂಗತ ಬಾಬು ಜಗಜೀವನ್ ರಾಮ್ ರವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಇಂದು ಚಾಲನೆ ನೀಡಲಾಗಿದೆ. ಶಾಸಕ ಶರತ್ ಬಚ್ಚೇಗೌಡ ಹಾಗೂ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. 40 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣವಾಗುತ್ತಿದ್ದು ಈ ನಿಟ್ಟಿನಲ್ಲಿ ಶಾಸಕರು ಪ್ರತಿಮೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು