ಲಕ್ಷ್ಮೇಶ್ವರ: ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಬಸ್, ತಪ್ಪಿದ ಭಾರಿ ಅನಾಹುತ
ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಬಸ್ ಹೋಟೆಲ್ ಗೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬಸ್ ಟರ್ನ್ ಆಗುವ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಬೋರ್ಡ್‌ಗೆ ಗುದ್ದಿದೆ. ಇದರಿಂದ ಸರ್ಕಲ್‌ನಲ್ಲಿ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ನಂತರ ಕೆಲ ಸಾರ್ವಜನಿಕರು ಮಧ್ಯ ಪ್ರವೇಶಿಸಿ ವಾಹನ ಸವಾರರಿಗೆ ತೊಂದರೆಯಾಗದಂತೆ ತಿಳಿಗೋಳಿಸಿದರು.