ಶಿರಸಿ: ಮಾದನಸರದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಯಲ್ಲಾಪುರ : ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾದನಸರದಲ್ಲಿ ಜೀವನದಲ್ಲಿ ಜಿಗುಪ್ಪೆಗೊಂಡ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ನಡೆದಿದೆ. ಮಾದನಸರದ ಮಹೇಶ ತಂದೆ ಜಟ್ಟಿ ಪಟಗಾರ (29) ಎಂಬ ಯುವಕ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಪೆಗೊಂಡು ಮಾದನಸರದ ತನ್ನ ಮನೆಯ ರೂಮಿನ ಕಟ್ಟಿಗೆ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನ ತಂದೆ ಜಟ್ಟಿ ಪಟಗಾರ ಈ ಸಾವಿನಲ್ಲಿ ಯಾವುದೇ ಸಂಶಯ ಇಲ್ಲ ಎಂದು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.