ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆದ ಮಹಿಳಾ ನೌಕರರ ಸಮ್ಮೇಳನವನ್ನು ಸಿದ್ದರಾಮಯ್ಯ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡೀ.ಕೆ. ಶಿವಕುಮಾರ್ ಸಹ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ “ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ” ಘೋಷಿಸಿರುವ ಸರ್ಕಾರದ ಐತಿಹಾಸಿಕ ನಿರ್ಧಾರಕ್ಕೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದವರು ಸಿದ್ದರಾಮಯ್ಯರನ್ನು ಸನ್ಮಾನಿಸಿ ಧನ್ಯವಾದಗಳನ್ನು ತಿಳಿಸಿದರು.ಋತುಚಕ್ರದ ಸಮಯದಲ್ಲಿ ಉದ್ಯೋಗಸ್ಥ ಮಹಿಳೆಯರು ಅನುಭವಿಸುವ ನೋವು ಮತ್ತು ವೇದನೆಗಳನ್ನು ಮನಗಂಡು, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಿಗೆ ಒಂದು ವೇತನ ಸಹಿತ ಋತುಚಕ್ರ ರಜೆ ನೀಡುವ ಮಹತ್ವದ ತೀರ್ಮಾನವನ್ನು ದೇಶದಲ್ಲಿ ಮೊದಲ ಬಾರಿಗೆ ತೆಗೆದುಕೊ