ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿತ್ರದುರ್ಗ ಜಿಲ್ಲೆಯಾದ್ಯಂತ ಭೀಮ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಎಬಿವಿಪಿ ವಿಭಾಗ ಸಂಚಾಲಕ ಆರ್.ಗೋಪಿ ತಿಳಿಸಿದ್ದಾರೆ. ಡಿಸೆಂಬರ್ 06 ರಿಂದ ಪ್ರಾರಂಭವಾಗಿ ಭೀಮ ನಮನದಲ್ಲಿ ಒಟ್ಟು ಏಳು ದಿನಗಳ ಕಾಲ ಸಾಪ್ತಾಹಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಸಾಮಾಜಿಕ ಸಾಮರಸ್ಯ, ಸಾರ್ವಜನಿಕ ಹಾಗೂ ಕ್ಯಾಂಪಸ್ ಕಾರ್ಯಕ್ರಮ, ಸ್ವಚ್ಛತಾ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ, ಸಸಿ ನೆಡುವ ಕಾರ್ಯಕ್ರಮ, ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮಗಳನ್ನು ಭೀಮ ನಮನ ಹೆಸರಿನಲ್ಲಿ ಆಯೋಜಿಸಲಾಗಿದೆ.