ರಾಯಚೂರು: ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು
ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು ಹಂಚಿಕೆ ಮಾಡಿರುವ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಹಿಂದೂ ಜಿಲ್ಲಾಧಿಕಾರಿಗಳು ಪತ್ರಿಕಾ ಹೇಳಿಕೆ ನೀಡಿದ್ದಾರೆ.