ಶಿವಮೊಗ್ಗ: ನಗರದ ತಾಲ್ಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ಶಿವಮೊಗ್ಗ ನಗರದಲ್ಲಿರುವ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಧೀಡಿರ್ ದಾಳಿ ನಡೆಸಿರುವ ಘಟನೆ ಗುರುವಾರ ಜರುಗಿದ ಲೋಕಾಯುಕ್ತ ಅಧಿಕಾರಿಗಳಿಗೆ ನೊಂದ ಮಹಿಳೆಯೊಬ್ಬರು ದೂರನ್ನು ನೀಡಿದ್ದರು. ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿ ಎಸ್ಪಿ ಉಮೇಶ್ ನಾಯಕ್ ನೇತೃತ್ವದಲ್ಲಿ ತಾಲೂಕು ಕಚೇರಿಯ ಪಡಸಾಲೆ ವಿಭಾಗಕ್ಕೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕಚೇರಿಯ ಸಿಬ್ಬಂದಿಗಳು ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ. ಈ ವೇಳೆ ಸಾರ್ವಜನಿಕರು ಕಚೇರಿ ಕೆಲಸದಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.