ಬೆಂಗಳೂರು ದಕ್ಷಿಣ: ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಭಕ್ತ ಕನಕದಾಸರ ಜಯಂತೋತ್ಸವ
ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ದಾಸಶ್ರೇಷ್ಠ, ವಿಶ್ವಮಾನವ ಶ್ರೀ ಭಕ್ತ ಕನಕದಾಸರ 538ನೇ ಜಯಂತೋತ್ಸವ ಕಾರ್ಯಕ್ರಮವು ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಶ್ರೀ ಎಚ್.ಎಂ. ರಮೇಶಗೌಡ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀಮತಿ ಲೀಲಾದೇವಿ ಆರ್. ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಟಿ.ಎನ್. ಜವರಾಯಗೌಡ, ಶ್ರೀ ಟಿ.ಎ. ಶರವಣ, ಮಾಜಿ ಶಾಸಕರಾದ ಶ್ರೀ ಕೆ.ಎ. ತಿಪ್ಪೇಸ್ವಾಮಿ ಹಾಗೂ ನಗರ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಶೈಲಾ ಸಂತೋಜಿ ರಾವ್ ಮುಂತಾದ ಗಣ್ಯರು ಭಾಗವಹಿಸಿದ್ದರು.