ಹುಬ್ಬಳ್ಳಿ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಮುಂಬೈ ಪೊಲೀಸರ ಹೆಸರಿನಲ್ಲಿ ವಾಟ್ಸ್ಆ್ಯಪ್ ಮೂಲಕ ಕರೆ ಮಾಡಿದ ವ್ಯಕ್ತಿಯೊಬ್ಬ, ಇಲ್ಲಿಯ ಭವಾನಿ ನಗರದ ವ್ಯಕ್ತಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿ ವಿವಿಧ ಖಾತೆಗಳಿಂದ 55,39,950 ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಎಸ್.ಎಸ್. ಪೂಜಾರ ವಂಚನೆಗೊಳದವರು. ಇವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ ವ್ಯಕ್ತಿ, ಅಕ್ರಮ ಹಣ ವರ್ಗಾವಣೆಯಲ್ಲಿ ನಿಮ್ಮ ಹೆಸರು ಕೇಳಿಬಂದಿದೆ. ದೇಶದ್ರೋಹಿಗಳಿಗೆ ಹಣ ಸಂದಾಯವಾಗಿದೆ ಎಂದು ಹೇಳಿ ನಕಲಿ ದಾಖಲೆ ತೋರಿಸಿ ಬೆದರಿಸಿದ್ದಾನೆ. ಈಗಾಗಲೇ 135 ಜನರನ್ನು ಬಂಧಿಸಿದ್ದು, ನಿಮ್ಮನ್ನು ಹಾಗೂ ನಿಮ್ಮ ಕುಟುಂಬದವರನ್ನು ಬಂಧಿಸಲು ಸಿಬಿಐ ವಾರೆಂಟ್ ಇದೆ. ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಹೆದರಿಸಿ ಮೊದಲು 39,950 ರೂ. ವ