ಸಿದ್ಧಾಪುರ: ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾದ ಶಾಸಕ ಭೀಮಣ್ಣ ನಾಯ್ಕ
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಅವರು ಇಂದು ಶುಕ್ರವಾರ ಸಿದ್ದಾಪುರದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ತಾಲೂಕು ಪಂಚಾಯತ ಸಭಾಭವನದಲ್ಲಿ ಇಂದು ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದ 2023-24ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ವಿವಿಧ ಶಾಲೆಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿ ಕ್ರೀಡೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು. ಸಿದ್ದಾಪುರ ಎಪಿಎಂಸಿ ವತಿಯಿಂದ ವಾರ್ಷಿಕ ಕ್ರೀಯಾ ಯೋಜನೆಯಡಿ ನಿರ್ಮಿಸಿರುವ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿ, ಮಳೆ ನೀರು ಕೊಯ್ಲು ಘಟಕಕ್ಕೆ ಚಾಲನೆ ನೀಡಿದರು.