ಬೆಂಗಳೂರು ಉತ್ತರ: ಸುರಂಗ ರಸ್ತೆ ಮಾರ್ಗ ನಿರ್ಮಾಣ ವಿಷಯದಲ್ಲಿ ಜಿದ್ದು ಒಳ್ಳೆಯದಲ್ಲ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರಿನಲ್ಲಿ ಸುರಂಗ ಮಾರ್ಗ ರಸ್ತೆ ನಿರ್ಮಾಣ ಕಾಮಗಾರಿ ವಿಚಾರದಲ್ಲಿ ಜಿದ್ದಿಗೆ ಬೀಳುವುದು ಯಾರಿಗೂ ಒಳ್ಳೆಯದಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಒಂದು ವ್ಯಕ್ತಿಯ ಪ್ರತಿಷ್ಠೆ ಹಾಗೂ ಕಿತ್ತಾಟಕ್ಕಿಂತ ಬೆಂಗಳೂರು ಅಭಿವೃದ್ಧಿಗೆ ಯಾವುದು ಮುಖ್ಯವೋ ಅದಕ್ಕೆ ಆದ್ಯತೆ ನೀಡುವುದು ಸೂಕ್ತ ಎಂದು ತಿಳಿಸಿದರು.