ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ಮಧ್ಯಾಹ್ನ 12ರವರೆಗೆ ಶೇ. 46.04 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಶೇ. 46.04ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 3,193 ಮತದಾರರಿದ್ದು, ಈವರೆಗೆ 770 ಪುರುಷರು ಮತ್ತು 700 ಮಹಿಳೆಯರು ಸೇರಿದಂತೆ ಒಟ್ಟು 1,470 ಮಂದಿ ಮತ ಚಲಾಯಿಸಿದ್ದಾರೆ.