ಬೆಂಗಳೂರು ಉತ್ತರ: ಯಲಹಂಕದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಕಸಘಟ್ಟಪುರ ಹಾಲಿ ಅಧ್ಯಕ್ಷರು
ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಯಲಹಂಕದ ಕಸಘಟ್ಟಪುರ ಗ್ರಾಮ ಪಂಚಾಯಿತಿ ಹಾಲಿ ಅಧ್ಯಕ್ಷರಾದ ಸಂಧ್ಯಾ ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಪ್ರಿಯಾ ಮೇರಿ, ಮುಖಂಡರಾದ ಚಿನ್ನಪ್ಪ ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಯಲಹಂಕದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಭಾರತೀಯ ಜನತಾ ಪಾರ್ಟಿ ಗೆ ಯಲಹಂಕ ಕ್ಷೇತ್ರ ಶಾಸಕರಾದ ಎಸ್.ಆರ್ ವಿಶ್ವನಾಥ್ ಸಮುಖದಲ್ಲಿ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ಸೇರ್ಪಡೆಗೊಂಡ ಮುಖಂಡರು ಮಾತನಾಡಿ ಪಕ್ಷ ಸಂಘಟನೆಗೆ ಶ್ರಮ ವಹಿಸುತ್ತೇವೆ ಎಂದು ತಿಳಿಸಿದರು.