ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನ : ನಗರದಲ್ಲಿ ಬೃಹತ್ ಅರೋಗ್ಯ ತಪಾಸಣಾ ಶಿಬಿರಕ್ಕೆ ಕೇಂದ್ರ ಸಚಿವ ಸೋಮಣ್ಣ ಚಾಲನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬೃಹತ್ ಅರೋಗ್ಯ ತಪಾಸಣಾ ಶಿಬಿರಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ತುಮಕೂರಿನಲ್ಲಿ ಚಾಲನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿ ಆವರಣದಲ್ಲಿ ಬುಧವಾರ ಬೆಳಿಗ್ಗೆ 10.30 ರ ಸಮಯದಲ್ಲಿ ಶಿಬಿರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಶ್ರೀದೇವಿ ಮೆಡಿಕಲ್ ಕಾಲೇಜಿನವತಿಯಿಂದ ಈ ಬೃಹತ್ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ವಿಧಾನ ಪರಿಷತ್ ಸದಸ್ಯ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ. ಹುಲಿನಾಯ್ಕರ್ ಅವರು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಅರೋಗ್ಯ ತಪಾಸಣೆ ನಡೆಸಿದರು. ಸಚಿವ ಶುಗರ್ ಲೆವೆಲ್ ತಿಂಡಿ ಸೇವನೆ ನಂತ್ರ 173 ಇತ್ತು.