ಬೆಂಗಳೂರು ಉತ್ತರ: ಓಬ್ಬವರ ಶೌರ್ಯ, ಸಾಹಸ, ಸಮಯ ಪ್ರಜ್ಞೆ ಅಳವಡಿಸಿಕೊಳ್ಳಿ: ನಗರದಲ್ಲಿ ಶಿವರಾಜ್ ತಂಗಡಗಿ ಕರೆ
ಒನಕೆ ಓಬವ್ವ ತೋರಿದ ಶೌರ್ಯ, ಸಾಹಸ ಮತ್ತು ಸಮಯ ಪ್ರಜ್ಞೆಯನ್ನು ಎಲ್ಲ ಮಹಿಳೆಯರು ಅಳವಡಿಸಿಕೊಳ್ಳುವ ಅಗತ್ಯ ಇದೆ ಎಂದು ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ನಗರದ ನಯನ ಸಭಾಂಗಣದಲ್ಲಿ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ ಎಂಬ ನುಡಿಗೆ ಅನ್ವರ್ಥವಾಗಿ ಓಬವ್ವ ತಾನು ಸೇರಿದ ಚಿತ್ರದುರ್ಗದ ಮಹಾಲಕ್ಷ್ಮೀಯಾಗಿ ಕಂಗೊಳಿಸುವ ಮೂಲಕ ಅಲ್ಲಿನ ಪ್ರಜೆಗಳನ್ನು ರಕ್ಷಿಸಿದ ದಿಟ್ಟ ಮಹಿಳೆ.