ಚಾಮರಾಜನಗರ: ನಗರದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ಹರಿದು ಬಂದ ಜನಸಾಗರ
ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ರೋಟರಿ ಭವನದ ಆವರಣದಲ್ಲಿ ರೋಟರಿ ಸಂಸ್ಥೆ ಹಾಗೂ ಅರವಿಂದ ಕಣ್ಣಿನ ಆಸ್ಪತ್ರೆ ಕೊಯಮತ್ತೂರು ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಣ್ಣಿನ ತಪಾಸಣೆ ಶಿಬಿರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಪಾಸಣೆ ಮಾಡಿಸಿಕೊಂಡರು.