ಕನ್ನಡ ಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಹಕಾರವನ್ನು ನೀಡಲಾಗುತ್ತದೆ ನಂಗಲಿ ಪಿಎಸ್ಐ ವಿದ್ಯಾಶ್ರೀ ಕನ್ನಡ ಭಾಷೆ, ಸಾಹಿತ್ಯ, ನಾಡು ನುಡಿಯನ್ನು ಬೆಳೆಸುವ ನಿಟ್ಟಿನಲ್ಲಿ ಯುವಜನತೆ ಮುಂದೆ ಬರುತ್ತಿರುವುದು ತುಂಬಾ ಸಂತಸದ ಸಂಗತಿ. ಆದ್ದರಿಂದ ಕನ್ನಡ ಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಹಕಾರವನ್ನು ನೀಡಲಾಗುತ್ತದೆ ಎಂದು ನಂಗಲಿ ಪಿಎಸ್ಐ ವಿದ್ಯಾಶ್ರೀ ಎಚ್.ಡಿ ಹೇಳಿದರು. ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ್ದ ಪಿಎಸ್ಐ ವಿದ್ಯಾಶ್ರೀ ಎಚ್.ಡಿ ಅವರಿಗೆ ಕನ್ನಡ ಬೆಳಗು ವೇದಿಕೆ ವತಿಯಿಂದ ಹಮ್ಮಿಕೊಂಡ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅ