ನಗರದಲ್ಲಿ ಮಾರಕಾಸ್ತ್ರ ಹೊಂದಿದ್ದ ಆರೋಪಿ ಬಂಧನ. ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮುಸ್ತಾಕ್ ದಾವಣಗೆರೆ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರಿಹಾಳ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಬುಧವಾರ, ಸಾರ್ವಜನಿಕವಾಗಿ ಮಾರಕಾಸ್ತ್ರಗಳಾದ ತಲ್ವಾರ್ ಮತ್ತು ಚಾಕು ಹಿಡಿದುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮುಸ್ತಾಕ್ ದಾವಣಗೆರೆ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.