ಕಾರವಾರ: ಗೋವಾದ ಕಾಣಕೋಣ ರಸ್ತೆ ಅಪಘಾತ ನಗರದ ವೈದ್ಯಕೀಯ ವಿದ್ಯಾರ್ಥಿ ಸಾವು, ಒಬ್ಬರಿಗೆ ಗಾಯ
ಕಾಣಕೋಣದ ಮಾಶೆಮ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರವಾರದ ಕ್ರಿಮ್ಸ್ ಕಾಲೇಜಿನ 23 ವರ್ಷದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡ ಪ್ರಕರಣ ನಡೆದಿದೆ. ಈ ಬಗ್ಗೆ ನಗರದಲ್ಲಿ ಬುಧವಾರ ಸಂಜೆ 5ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಮೃತರನ್ನು ಕಾರವಾರದ ಕ್ರಿಮ್ಸ್ ಕಾಲೇಜಿನ ತೃತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆದರ್ಶ್ ಪೂಜಾರಿ ಎಂದು ಗುರುತಿಸಲಾಗಿದೆ.