ಡಿ.13,ಶನಿವಾರ ಬೆಳಿಗ್ಗೆ 10ಕ್ಕೆ ಕಂಪ್ಲಿ ಪಟ್ಟಣದ ಎಸ್.ಜಿ.ವಿ.ಎಸ್.ಎಸ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳು ಸ್ಥಾಪಿಸಲ್ಪಟ್ಟಿದ್ದು, ಕಂಪ್ಲಿಯ ಈ ಕೇಂದ್ರದಲ್ಲಿ ಒಟ್ಟು 328 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಅಧಿಕ್ಷಕರು ತಿಳಿಸಿದ್ದಾರೆ. ಪರೀಕ್ಷೆ ಶಾಂತ ವಾತಾವರಣದಲ್ಲಿ ಯಾವುದೇ ಅಡಚಣೆಗಳಿಲ್ಲದೆ ನಡೆಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.