ಹರಿಹರ: ಅಪಚಿತರ ವಾಹನ ಡಿಕ್ಕಿ; ಎಕ್ಕೆಗೊಂದಿ ಗ್ರಾಮದಲ್ಲಿ ಭಿಕ್ಷುಕಿ ಸಾವು
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಕ್ಕೆಗೊಂದ ಗ್ರಾಮದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಭಿಕ್ಷುಕಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 65 ವರ್ಷ ಮಹಿಳೆಯ ಗ್ರಾಮದಲ್ಲಿ ಎರೆಡು ಮೂರು ದಿನಗಳಿಂದ ಭಿಕ್ಷೆ ಬೇಡುತ್ತ ತಿರುಗಾಡುತ್ತಿದ್ದರು. ಭಾನುವಾರ ಬೆಳಿಗಿನ ಜಾವ ನಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿರುವ ಹರಿಹರ-ಹೊನ್ನಾಳಿ ರಸ್ತೆಯಲ್ಲಿ ಒಬ್ಬರ ಮಹಿಳೆ ಮಲಗಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಹೋಗಿ ನೋಡಿದಾಗ ಭಿಕ್ಷೆ ಬೇಡುತ್ತಿದ್ದ ಮಹಿಳೆಯಾಗಿದ್ದು, ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮದ ಆಸೀಫ್ ಉಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಜಿಲ್ಲಾ ಸೋಮವಾರ ಸಂಜೆ 4 ಗಂಟೆಗೆ ಪ್ರಕಟಣೆ ಮೂಲಕ ತಿಳಿಸಿದೆ.