ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ನಡುವೆ ಸಮನ್ವಯ ಅಗತ್ಯವಾಗಿದೆ. ದುರ್ಬಲ ಹಾಗೂ ವಂಚಿತರಿಗೆ ಕಾಲಮಿತಿಯಲ್ಲಿ ನ್ಯಾಯ ದೊರಕಬೇಕು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಅನು ಶಿವರಾಮನ್ ಪ್ರತಿಪಾದಿಸಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಾನೂನು ಸೇವಾ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.