ಹುಬ್ಬಳ್ಳಿ ನಗರ: ನಗರದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದ ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 37 ರ ಚಲವಾದಿ ಓಣಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ವಿತರಿಸಿ, ಮಹಿಳೆಯರು ಆರ್ಥಿಕ ಸ್ವಾವಲಂಬನೆ ಹೊಂದುವ ಮೂಲಕ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತೆ ಹಾಗೂ ಇನ್ನೂ ಹೆಚ್ಚಿನ ಮಹಿಳೆಯರಿಗೆ ತರಬೇತಿ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವಂತೆ ತಿಳಿಸಿದರು.. ಈ ಸಂದರ್ಭದಲ್ಲಿ ಹಿರಿಯರಾದ ಚನ್ನು ಪಾಟೀಲ್, ಪಾಲಿಕೆ ಸದಸ್ಯರಾದ ಉಮೇಶಗೌಡ ಕೌಜಗೇರಿ, ಪ್ರಮುಖರಾದ ಎಮ್.ಡಿ.ಮೆಣಸಿನಕಾಯಿ, ಪರಶುರಾಮ ಚಲವಾದಿ, ಹನುಮಂತ, ಪ್ರವೀಣ, ಬಸವರಾಜ ಅಂಗಡಿ, ರಾಮನಗೌಡ ಶೆಟ್ಟನಗೌಡರ, ನಾರಾಯಣ ಕಿರೇಸೂರ, ರಘುನಾಥ್ ನಂದಿಬಿಸ್ತನವರ ಹಾಗೂ ಇತರರು ಉಪಸ್ಥಿತರಿದ್ದರು.