ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆ ಬಗ್ಗೆ ಶಾಸಕ ಟಿ.ಡಿ ರಾಜೇಗೌಡ ತಮ್ಮದೇ ಸರ್ಕಾರದ ವಿರುದ್ಧ ಹೀಗೆ ಹೇಳಿದ್ಯಾಕೆ..?.
ಮಲೆನಾಡು ಭಾಗದಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಗೆ ವಾಹನ ಸಂಚಾರ ಕಷ್ಟಕರವಾಗಿದೆ. ಶೃಂಗೇರಿ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟಿದ್ದು ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಮಲೆನಾಡಲ್ಲಿ ಬಾರಿ ಮಳೆ ಹೆಚ್ಚಾಗಿರುವ ಜೊತೆಗೆ ವಾಹನಗಳ ಓಡಾಟವು ಹೆಚ್ಚಳಗೊಂಡಿದೆ. ಈಗಾಗಲೇ ಮುಖ್ಯಮಂತ್ರಿಗಳು ವಿಶೇಷ ಅನುದಾನವೆಂದು ಎಂಟು ಕೋಟಿ ಬಿಡುಗಡೆ ಮಾಡಿದ್ದಾರೆ. ರಸ್ತೆಗುಂಡಿ ಮುಚ್ಚಲು ವಿಟ್ ಮಿಕ್ಸ್ ಜೊತೆಗೆ ಸಿಮೆಂಟ್ ಮಿಶ್ರಣ ಮಾಡಿ ಮೂರು ಬಾರಿ ಗುಂಡಿಗಳನ್ನು ಮುಚ್ಚಿದ್ದೇವೆ ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಮಳೆ ಕಡಿಮೆಯಾದ ಕೂಡಲೇ ತೀರಾ ಹದಗೆಟ್ಟಿರುವ ಕಡೆ ರಸ್ತೆಗಳನ್ನು ಮರು ಡಾಂಬರೀಕರಣ ಮಾಡಲಾಗುವುದು ಜೊತೆಗೆ ಗುಂಡಿ ಮು