ಪಾಂಡವಪುರ: ಮೇಲುಕೋಟೆಯಲ್ಲಿ ನ-9ರಂದು ಉಪ ರಾಷ್ಟ್ರಪತಿ ಕಾರ್ಯಕ್ರಮ: ಸಕಲ ಸಿದ್ಧತೆಗೆ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ ಕುಮಾರ್
ಮೇಲುಕೋಟೆಗೆ ಉಪ ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಂದ ಆದೇಶ. ನ. 9 ರಂದು ಮೇಲುಕೋಟೆಗೆ ಉಪ ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ ಅವಕಾಶ ನೀಡದೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ತಿಳಿಸಿದರು. ಅಲ್ಲದೆ, ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.