ಹುಬ್ಬಳ್ಳಿ ಧಾರವಾಡ ನಗರದಲ್ಲಿ ಡಿಜಿಟಲ್ ಅರೆಸ್ಟ್ ಕೇಸ್ ನಲ್ಲಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಒಂದು ಕೋಟಿ ರೂಪಾಯಿ ಕಳೆದುಕೊಂಡಿರುವುದು ಬೇಸರದ ಸಂಗತಿ ಎಂದು ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಅವರು, ಡಿಜಿಟಲ್ ಅರೆಸ್ಟ್ ಮಾಡುತ್ತೇನೆ ಎಂದು ಹೇಳಿ ಹಣ ವಸೂಲಿ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಹಣ ಕಳೆದುಕೊಂಡು ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಅವರು ಸಲಹೆ ನೀಡಿದರು.