ಬೆಂಗಳೂರು ಉತ್ತರ: ಅಂಗನವಾಡಿ ಸುವರ್ಣ ಮಹೋತ್ಸವ: ‘ಅಕ್ಕ ಪಡೆ’ಗೆ ಚಾಲನೆ ಕುರಿತಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಾ. ಜಿ. ಪರಮೇಶ್ವರರನ್ನು ಭೇಟಿಯಾಗಿ ಚರ್ಚೆ
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19ರಂದು ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ‘ಅಕ್ಕ ಪಡೆ’ಗೆ ಚಾಲನೆ ನೀಡುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ರಾಜ್ಯದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದು, ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೌರ್ಜನ್ಯಕ್ಕೊಳಗಾದವರಿಗೆ ತಕ್ಷಣದ ನೆರವು ಒದಗಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಸಹಯೋಗದಲ್ಲಿ ‘ಅಕ್ಕ ಪಡೆ’ ಕಾರ್ಯನಿರ್ವಹಿಸಲಿದೆ.