ಬೆಂಗಳೂರು ಉತ್ತರ: ಫಾರ್ಮಾಸಿಟಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್, ಮೂವರು ವಿದ್ಯಾರ್ಥಿಗಳು ಅರೆಸ್ಟ್
ದೇವನಹಳ್ಳಿ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಿಭಾಗದ ಡಿಸಿಪಿ ಮಿಥುನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಫಾರ್ಮಾಸಿಟಿಕಲ್ ಕಾಲೇಜಿನಲ್ಲಿ 3ನೇ ವರ್ಷದ ವಿದ್ಯಾರ್ಥಿಗಳು ಮೊದಲ ವರ್ಷದ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡಿ ಗಲಾಟೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರ್ಯಾಗಿಂಗ್ ಕಾನೂನು ಬಾಹಿರವಾಗಿದ್ದು, ತನಿಖೆ ನಡೆಯುತ್ತಿದ್ದು, ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.