ಶಿವಮೊಗ್ಗ: ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ನಗರದಲ್ಲಿ ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ
ಶಿವಮೊಗ್ಗ ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಲೋಕೋಪಯೋಗಿಯ ಇಲಾಖೆಯ ಕಾರ್ಯ ಪಾಲಕ ಅಭಿಯಂತರರಿಗೆ ಸೂಚನೆಯನ್ನು ನೀಡಿದ್ದಾರೆ. ಶುಕ್ರವಾರ ನಗದಾ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಸ್ತೆ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನದಟ್ಟನೆಯ ಹಾಗೂ ಸಮಸ್ಯಾತ್ಮಕ ಸ್ಥಳಗಳನ್ನು ಗುರುತಿಸಿ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.