ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರದ ಅರ್ಹತಾ ಪರೀಕ್ಷೆಯನ್ನು ನವೆಂಬರ್ 12ರ ಮಧ್ಯಾಹ್ನ 3 ರಿಂದ 4.30ರವರೆಗೆ ರಾಯಚೂರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಮೊದಲ 100 ಅಭ್ಯರ್ಥಿಗಳಿಗೆ ಮಾತ್ರ ತರಬೇತಿಗೆ ಅವಕಾಶ ನೀಡಲಾಗುವುದು ಎಂದು ಮಂಗಳವಾರ ಸಂಜೆ 6 ಗಂಟೆಗೆ ಸಹಾಯಕ ಆಯುಕ್ತರು ಪತ್ರಿಕಾಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಈಗಿನಿಂದಲೇ ಪರೀಕ್ಷೆಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.