ಶಿರಸಿ: ಕೆ.ಎಚ್.ಬಿ. ಕಾಲೋನಿಯ ಬಳಿ ಗಾಂಜಾ ಅಮಲಿನಲ್ಲಿದ್ದ ಯುವಕನ ಬಂಧನ
ಶಿರಸಿ: ನಗರದ ಕೆಎಚ್‌ಬಿ ಕಾಲೋನಿಯ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಮಲಿನಲ್ಲಿದ್ದ ಯುವಕನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಇಲ್ಲಿನ ಇಂದಿರಾನಗರದ ಕಿರಣ ತಂದೆ ಕೃಷ್ಣಾ ಹರಿಜನ (೨೦) ಬಂಧಿತ ಯುವಕ. ಈತ ಜು ೪ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಕೆ.ಎಚ್‌ಬಿ ಕಾಲೋನಿಯಲ್ಲಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಅಮಲಿನಲ್ಲಿರುವ ಅನುಮಾನದ ಮೇಲೆ ಹೊಸ ಮಾರುಕಟ್ಟೆ ಠಾಣೆ ಪಿಎಸ್‌ಐ ರತ್ನಾ ಕುರಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ, ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.