ಶಿಕಾರಿಪುರ: ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪಟ್ಟಣದ ಕುಮುದ್ವತಿ ಪದವಿ ಪೂರ್ವ ಕಾಲೇಜಿನ ಎಂ.ಎಸ್ ಪವನ್ ರಾಜ್ಯಕ್ಕೆ ದ್ವಿತೀಯ ಸ್ಥಾನ
ಶಿಕಾರಿಪುರದ ಕುಮುದ್ವತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿರುವ ಎಂ.ಎಸ್ ಪವನ್ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬುಧವಾರ ಸಂಸದ ಬಿ.ವೈ ರಾಘವೇಂದ್ರ ಪ್ರತಿಭಾನ್ವಿತ ವಿದ್ಯಾರ್ಥಿಗೆ ಸಿಹಿ ತಿನ್ನಿಸಿ ಅಭಿನಂದಿಸಿ, ಮುಂದಿನ ಶೈಕ್ಷಣಿಕ ಪಯಣಕ್ಕೆ ಶುಭ ಕೋರಿದರು. ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜು ಹಾಗೂ ತಾಲ್ಲೂಕಿಗೆ ಉತ್ತಮ ಹೆಸರು ತಂದಿರುವುದಕ್ಕೆ ಶುಭ ಹಾರೈಸಿದ್ದಾರೆ.