ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ, ಪರಿಶೀಲನೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿರುವ ವಿ ಐಎಸ್ ಎಲ್ ಕಾರ್ಖಾನೆಗೆ ಭೇಟಿಯನ್ನು ನೀಡಿದರು. ಸಂಬಂಧಪಟ್ಟ ಅಧಿಕಾರಿಗಳ ಬಳಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಕಾರ್ಖಾನೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.