ಯಲ್ಲಾಪುರ : ಜ.17 ಶನಿವಾರದಂದು ವೈಟಿಎಸ್ ಎಸ್ ಮೈದಾನದಲ್ಲಿ ವಿರಾಟ ಹಿಂದೂ ಸಮಾವೇಶವನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಪಾಲ್ಗೊಳ್ಳಬೇಕು ಎಂದು ಸಮಾವೇಶ ಸಮಿತಿಯ ಅಧ್ಯಕ್ಷ ಕುಮಾರ್ ಭಟ್ ಹಂಡ್ರಮನೆ ಹೇಳಿದರು. ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ಸಮಾವೇಶದ ಕರಪತ್ರ ಬಿಡುಗಡೆಗೊಳಿಸಿ,ನಂತರ ಮಾಹಿತಿ ನೀಡಿ ಕಾರ್ಯಕ್ರಮದಲ್ಲಿ, ಶ್ರೀಮನ್ನೆಲೆ ಮಾವಿನಮಠದ ಶ್ರೀಮದ್ ಮಾಧವಾನಂದ ಭಾರತೀ ಮಹಾಸ್ವಾಮಿಗಳುಪೂಜ್ಯ ಸಾನಿಧ್ಯ ವಹಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಅಖಿಲ ಭಾರತೀಯ ಪ್ರತಿನಿಧಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ನೆರವೇರಿಸಲಿದ್ದಾರೆ ಎಂದರು.