ಶಿವಮೊಗ್ಗ: ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೊಳಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ನಗರದಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರ ಸಂಘದ ಅಧ್ಯಕ್ಷ ಶಶಿಕುಮಾರ್
ಸರ್ಕಾರದಿಂದ ಬರಬೇಕಾದ ಗುತ್ತಿಗೆದಾರ ಬಾಕಿ ಮೊತ್ತವನ್ನು 15 ದಿನಗಳಲ್ಲಿ ಬಿಡುಗಡೆ ಮಾಡದೇ ಇದ್ದರೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಗುರುವಾರ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಶಶಿಕುಮಾರ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಇಲಾಖೆಗಳಿಗೆ ಕಾಮಗಾರಿಗೆ ಸಂಬಂಧ ಪಟ್ಟಂತೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ ಎಂದರು.