ಹಳಿಯಾಳ : ತಾಲೂಕಿನ ಬಾಣಸಗೇರಿಯಲ್ಲಿ ಸಾರಿಗೆ ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹಾಗೂ ಇತರ ಪ್ರಯಾಣಿಕರನ್ನು ಹಳಿಯಾಳದ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅವರು ಇಂದು ಗುರುವಾರ ಬೆಳಿಗ್ಗೆ 10 ರಿಂದ 10.30 ಗಂಟೆ ಸುಮಾರಿಗೆ ಭೇಟಿಯಾಗಿ ಗಾಯಗೊಂಡವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ಗಾಯಾಳುಗಳಿಗೆ ಅಗತ್ಯವಾದ ತುರ್ತು ಹಾಗೂ ಸಮರ್ಪಕ ಚಿಕಿತ್ಸೆಯನ್ನು ಒದಗಿಸುವಂತೆ ಸೂಚನೆ ನೀಡಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನಾ ವಿವರವನ್ನು ಪಡೆದು, ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಗಂಭೀರವಾಗಿ ತನಿಖೆ ನಡೆಸಿ,ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಪ್ರಮುಖ ಕೈಗೊಳ್ಳುವಂತೆ ಸೂಚಿಸಿದರು.