ಮಾನ್ವಿ: 7 ಕೋಟಿ 60 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ
Manvi, Raichur | Nov 7, 2025 ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂದರ್ಭದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅನೇಕ ಜನಪರ ಗ್ಯಾರಂಟಿ ಯೋಜನೆಗಳೊಂದಿಗೆ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದೆ. 7 ಕೋಟಿ 60 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಮುಗಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಹಂಪಯ್ಯ ನಾಯಕ ಅವರು ಜಂಟಿಯಾಗಿ ಅಧಿಕಾರಿಗಳಿಗೆ ತಿಳಿಸಿದರು.