ಕಂಪ್ಲಿ: ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟ್ ಆಡುವಂತಿಲ್ಲ, ನಗರದಲ್ಲಿ ಪೊಲೀಸ್ ಪ್ರಕಟಣೆ
Kampli, Ballari | Oct 19, 2025 ಕಂಪ್ಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಅಥವಾ ಖಾಸಗಿ ಸ್ಥಳಗಳಲ್ಲಿ ಇಸ್ಪೀಟ್ ಹಾಗೂ ಜೂಜಾಟ ಆಡುವಂತಿಲ್ಲ ಎಂದು ಕಂಪ್ಲಿ ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ. ಅ.19, ಭಾನುವಾರ ಬೆಳಿಗ್ಗೆ 11 ಗಂಟೆಗೆ ಹೊರಡಿಸಿದ ಪ್ರಕಟಣೆಯಲ್ಲಿ, ಹಬ್ಬದ ನೆಪದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಅಹಿತಕರ ಘಟನೆಗಳು ನಡೆದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಪೊಲೀಸರು ಸಾರ್ವಜನಿಕರಿಗೆ ಶಾಂತಿಯುತವಾಗಿ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದ್ದಾರೆ.