ಹಾಸನ: ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ನಗರದಲ್ಲಿ ಮಾಜಿ ಪಿ.ಎಂ ಎಚ್ಡಿ ದೇವೇಗೌಡ
Hassan, Hassan | Sep 14, 2025 ಹಾಸನ: ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಬೇಡ 93ನೇ ಇಳಿವಯಸ್ಸಿನಲ್ಲಿರುವ ನಾನು ರಾಜಕೀಯ ಕಾರಣಕ್ಕಾಗಿ ಮಾತನಾಡುವುದಿಲ್ಲ. 65 ವರ್ಷಗಳ ರಾಜಕೀಯ ಜೀವನ ದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಈ ವಿಚಾರದಲ್ಲಿ ಟೀಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ಕೆಲಸ ಮಾಡಿದ್ದೇವೆ, ಈಗ ಬೇರೆ ಪಕ್ಷದಲ್ಲಿ ದ್ದೇವೆ. ಚುನಾವಣೆ ಬಂದಾಗ ರಾಜಕಾರಣ ಮಾಡಿದರಾ ಯಿತು. ಹಿಂದೆ ಏನೇನು ನಡೆಯಿತು ಎಂಬುದರ ಪರಾಮರ್ಶೆ ಈಗ ಬೇಡ. ಕೈಗಾರಿಕಾ ಕಾರಿಡಾರ್ ವಿಸ್ತರಣೆಯಾದರೆ ಜಿಲ್ಲೆಗೆ ಅನುಕೂಲವಾಗುತ್ತದೆ. ಬೇರೆ ಜಿಲ್ಲೆಗಳಿಗೆ ಹೋಲಿ ಸಿದರೆ ಹಾಸನ ತುಂಬಾ ಹಿಂದಿದೆ ಎಂದರು.