ಮಡಿಕೇರಿ: ಕೊಡಗು: ದಸರಾ ಹಿನ್ನೆಲೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಸರಾ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶಾಸಕ ಡಾ. ಮಂತರ್ ಗೌಡ ಅವರ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಖಾಸಗಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.