ಚಾಮರಾಜನಗರ: ಮರಿಯಾಲ ಸಮೀಪ ಗೂಡ್ಸ್ ವಾಹನ ಪಲ್ಟಿ, ಚಾಲಕನಿಗೆ ಗಂಭೀರ ಗಾಯ
ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿದ್ದ ಘಟನೆ ನಡೆದಿದೆ. ಮೈಸೂರು-ಚಾಮರಾಜನಗರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಪಲ್ಟಿಯಾದ ಹಿನ್ನೆಲೆ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಚಾಲಕನನ್ನು ಮೇಲೆ ಎತ್ತಿದ್ದಾರೆ. ನಂತರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.