ಬೆಳಗಾವಿ: ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್
ಬೆಳಗಾವಿಯ ಅಷ್ಟೆ ಗ್ರಾಮದ ಸ್ಮಶಾನದ ಬಳಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ನಾಗಪ್ಪ ನಿಂಗಪ್ಪ ಪೂಜೇರಿ ಎಂಬಾತನನ್ನು ಮಾರಿಹಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 7 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಜಪ್ತಿ ಮಾಡಲಾಗಿದೆ.