ಶಿವಮೊಗ್ಗ: ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ; ಕ್ರಮಕ್ಕೆ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ
ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಜ್ವರದ ಕುರಿತಂತೆ ಕ್ರಮವಹಿಸುವಂತೆ ಸೂಚಿಸಿ, ದಿನನಿತ್ಯ ಫಾಗಿಂಗ್ ವ್ಯವಸ್ಥೆ, ಸ್ಪ್ರೇ ಸಿಂಪಡಣೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಶಾಸಕ ಎಸ್ ಎನ್ ಚನ್ನಬಸಪ್ಪ ಆರೋಗ್ಯ ಅಧಿಕಾರಿಗೆ ಸೂಚಿಸಿದರು. ಮಂಗಳವಾರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ನೀಡಿದರು.