ಆನೇಕಲ್: ಹಾರಗದ್ದೆಯಲ್ಲಿ ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವ, ರಥ ಎಳೆದ ಭಕ್ತರು
ಆನೇಕಲ್ ತಾಲ್ಲೂಕಿನ ಹಾರಗದ್ದೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು, ಅಲಂಕೃತ ರಥದಲ್ಲಿ ಚನ್ನಕೇಶವ ಸ್ವಾಮಿಯ ಮೂರ್ತಿಯನ್ನು ಕೂರಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಮಾಡಿಸಲಾಯಿತು. ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ರಥವನ್ನ ಎಳೆದ ಭಕ್ತಾದಿಗಳು ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ಪ್ರಾರ್ಥಿಸಿದರು. ಶಾಸಕ ಕೃಷ್ಣಪ್ಪ ಸೇರಿದಂತೆ ಹಲವು ಗಣ್ಯರು ರಥೋತ್ಸವದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು