ಧಾರವಾಡ: ಮುರಕಟ್ಟಿ ಗ್ರಾಮದಲ್ಲಿ ಕರಿಯಮ್ಮ ದೇವಿ ಚಿನ್ನದ ಆಭರಣ ಹಾಗೂ ಬೆಳ್ಳಿ ಕಿರೀಟ ಕದ್ದ ಕಳ್ಳರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಧಾರವಾಡ ತಾಲೂಕಿನ ಮುರಕಟ್ಟಿ ಗ್ರಾಮದಲ್ಲಿ ರಾತ್ರೋರಾತ್ರಿ ಕರಿಯಮ್ಮ ದೇವಿ ದೇವಸ್ಥಾನದಲ್ಲಿನ ದೇವಿಯ ಚಿನ್ನದ ಆಭರಣಗಳನ್ನು ಹಾಗೂ ಬೆಳ್ಳಿ ಕಿರೀಟವನ್ನು ಕಳ್ಳರು ಕದೊಯ್ಯುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಾದ್ಯಮಗಳಿಗೆ ಲಭ್ಯವಾಗಿದೆ. ಬೈಕ್ ಮೇಲೆ ಬಂದಿರುವ ಕಳ್ಳರು ಯಾರು ಇಲ್ಲದ ಸಮಯದಲ್ಲಿ ದೇವಸ್ಥಾನದ ಒಳಗೆ ಬಂದು ಚಿನ್ನದ ಹಾಗೂ ಬೆಳ್ಳಿಯ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.