ತುಮಕೂರು ದಸರಾ ಮಹೋತ್ಸವ–2026ರ ಅಂಗವಾಗಿ ಕಾರ್ ರ್ಯಾಲಿಗೆ ಹಸಿರು ನಿಶಾನೆ
ತುಮಕೂರು:ನಾಡಹಬ್ಬ ತುಮಕೂರು ದಸರಾ ಮಹೋತ್ಸವ–2026ರ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ ರ್ಯಾಲಿಗೆ ಜಿಲ್ಲಾಧಿಕಾರಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವಾಹನ ಸವಾರರಿಗೆ ಶುಭ ಹಾರೈಸಿದ ಜಿಲ್ಲಾಧಿಕಾರಿಗಳು, ತುಮಕೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ಇಂತಹ ವೈವಿಧ್ಯಮಯ ಕಾರ್ಯಕ್ರಮಗಳು ಜಿಲ್ಲೆಯ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಸಾರ್ವಜನಿಕರಲ್ಲಿ ಉತ್ಸವದ ಸಂಭ್ರಮವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ರ್ಯಾಲಿಯ ಆಯೋಜಕರು, ವಾಹನ ಸವಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
#tumakuru #dasara #nammatumakuru #carrally
Yadgir, Yadgir | Oct 18, 2026