ಬಾದಾಮಿ: ಆಸಂಗಿ-ಕಟಗಿನಹಳ್ಳಿ ಗ್ರಾಮದಲ್ಲಿ ಶ್ರದ್ಧಾಭಕ್ತಿಗಳಿಂದ ಜರುಗಿದ ಶ್ರೀ ಮಾರುತೇಶ್ವ ಜಾತ್ತಾ ಮಹೋತ್ಸವ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಆಸಂಗಿ-ಕಟಗಿನಹಳ್ಳಿ ಗ್ರಾಮದ ಆರಾಧ್ಯ ದೇವರಾದ ಶ್ರೀ ಶ್ರೀ ಮಾರುತೇಶ್ವರ ದೇವರ ಜಾತ್ರಾ ಮಹೋತ್ಸವ ಶ್ರದ್ಧಾಭಕ್ತಿಗಳಿಂದ ಜರುಗಿತು.ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಬಾಗಲಕೋಟೆಯ ಬಿಜೆಪಿಯ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರು ಭಾಗವಹಿಸಿ ದೇವರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಭಕ್ತರು ಉಪಸ್ಥಿತರಿದ್ದರು