ಹಾಸನ: ಅತಿಥಿ ಉಪನ್ಯಾಸಕರ ನೇಮಕ ವಿಳಂಬ ಖಂಡಿಸಿ ನಗರದಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Hassan, Hassan | Sep 26, 2025 ಹಾಸನ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ವಿಳಂಬ ನೀತಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಇತರೆ ಮೂರು ಸರ್ಕಾರಿ ಕಾಲೇಜಿಗಳ ವಿದ್ಯಾರ್ಥಿನಿಯರು ಪ್ರತಿಭಟನಾ ಮೆರವಣಿಗೆಯಲ್ಲಿ ಎನ್‌ಆರ್ ವೃತದ ಮೂಲಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು ಹಾಗೂ ವಿದ್ಯಾರ್ಥಿಗಳು ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜುಗಳಲ್ಲಿ 6,000