ಹೊಸನಗರ: ರಿಪ್ಪನ್ ಪೇಟೆ ಬಳಿ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರನ್ನು ಕೆರೆಗೆ ಉರುಳಿ ಬಿದ್ದು ಆ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದು ಗಂಭೀರವಾಗಿ ಗಾಯಗೊಂಡಿದ್ದವರ ಆರೋಗ್ಯವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವಿಚಾರಿಸಿದ್ದಾರೆ. ಜೇನುಕಲ್ಲಮ್ಮ ದೇವಿ ದರ್ಶನಾ ಪಡೆದು ವಾಪಸ್ ತೆರಳುತ್ತಿದ್ದ ವೇಳೆ ಚಿಪ್ಪಿಗರ ಕೆರೆ ಏರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಕೆರೆಗೆ ಉರುಳಿ ಬಿದ್ದಿತ್ತು.ಈ ಅಪಘಾತದಲ್ಲಿ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಹಕರಿಸಿರುವ ಘಟನೆ ಮಂಗಳವಾರ ನಡೆದಿದೆ.